Breaking

6/trending/recent
Type Here to Get Search Results !

ಸಾವಿರಾರು ಕಾರ್ಯಕರ್ತರ ಜೊತೆಗೆ ಮೆರವಣಿಗೆಯ ಮೂಲಕ ಸಾಗಿ ಬಂದು ಪುತ್ತೂರು ಕಾಂಗ್ರೆಸ್‍ ಅಭ್ಯರ್ಥಿ ಅಶೋಕ್ ಕುಮಾರ್ ರೈ ನಾಮಪತ್ರ ಸಲ್ಲಿಕೆ

ಜಾಹೀರಾತು/Advertisment
ಸಾವಿರಾರು ಕಾರ್ಯಕರ್ತರ ಜೊತೆಗೆ ಮೆರವಣಿಗೆಯ ಮೂಲಕ ಸಾಗಿ ಬಂದು ಪುತ್ತೂರು ಕಾಂಗ್ರೆಸ್‍ ಅಭ್ಯರ್ಥಿ ಅಶೋಕ್ ಕುಮಾರ್ ರೈ ನಾಮಪತ್ರ ಸಲ್ಲಿಕೆ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನಾಮಪತ್ರ ಸಲ್ಲಿಸಲು ಮೆರವಣಿಗೆಯಲ್ಲಿ ಕಾರ್ಯಕರ್ತರ ಜೊತೆಗೆ ಸಾಗಿ ಬಂದರು.
ಪುತ್ತೂರು ದರ್ಬೆ ವೃತ್ತದಿಂದ ಹೊರಟ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಅಭ್ಯರ್ಥಿ ಅಶೋಕ್ ಕುಮಾರ್ ದರ್ಬೆ‍ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಗೆ ಹಾರಾರ್ಪಣೆ ಮಾಡಿ ತೆಂಗಿನಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

ವಿಶೇಷವಾಗಿ ಕೊಂಬು,ಕಲ್ಲಡ್ಕದ ಗೊಂಬೆ, ನಾಸಿಕ್ ಬ್ಯಾಂಡ್, ಹುಲಿವೇಷ ಮೆರವಣಿಗೆಗೆ ಮೆರುಗು ನೀಡಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಅಲಿ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ರಾಜಾರಾಮ್ ಕೆ.ಬಿ., ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಸಹಿತ ಹಲವಾರು ಮಂದಿ ಗಣ್ಯರು ಭಾಗವಹಿಸಿದರು.

Post a Comment

0 Comments
* Please Don't Spam Here. All the Comments are Reviewed by Admin.